Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:40 - ಕನ್ನಡ ಸಮಕಾಲಿಕ ಅನುವಾದ

40 “ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಹೀಗಿರಲಾಗಿ ಹೇಗೆ ಹಣಜಿಯನ್ನು ಆರಿಸಿತೆಗೆದು ಸುಟ್ಟುಬಿಡುತ್ತಾರೋ, ಹಾಗೆಯೇ ಯುಗದ ಸಮಾಪ್ತಿಯಲ್ಲಿ ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಕಶೆ ಕಳೆ ಕಾಡುನ್ ಆಗಿತ್ ಘಾಲುನ್ ಜಾಳ್ವುನ್ ಹೊತಾ, ಹ್ಯಾ ಜಗಾಚ್ಯಾ ಅಕ್ರಿಚ್ಯಾ ಕಾಲಾತ್‍ಬಿ ತಸೆಚ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:40
8 ತಿಳಿವುಗಳ ಹೋಲಿಕೆ  

ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ,


ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು