Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:44 - ಕನ್ನಡ ಸಮಕಾಲಿಕ ಅನುವಾದ

44 “ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 “ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ, ಎಕ್ ಮಾನ್ಸಾಕ್ ಎಕ್ ಶೆತಾತ್ ಬದಿಕ್ ಗಾವ್ತಾ, ತೊ ತೆ ಅನಿ ಪರ್ತುನ್ ಧಾಪುನ್ ಥವ್ತಾ, ತೆಚೆಸಾಟ್ನಿ ತೊ ಲೈ ಕುಶಿ ಹೊತಾ ಅನಿ ಜಾವ್ನ್ ಅಪ್ನಾಚೆ ಹೊತ್ತೆ ಸಗ್ಳೆ ಇಕ್ತಾ ಅನಿ ಯೆವ್ನ್ ತೆ ಶೆತ್ ತೊ ಇಕಾತ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:44
29 ತಿಳಿವುಗಳ ಹೋಲಿಕೆ  

ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.


ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.


ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.


ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.


ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.


“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು