Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:47 - ಕನ್ನಡ ಸಮಕಾಲಿಕ ಅನುವಾದ

47 “ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮತ್ತು ಪರಲೋಕರಾಜ್ಯವು ಒಂದು ಬಲೆಗೆ ಹೋಲಿಕೆಯಾಗಿದೆ. ಅದನ್ನು ಸಮುದ್ರದಲ್ಲಿ ಹಾಕಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ಪರಲೋಕರಾಜ್ಯವು ಸರೋವರದೊಳಗೆ ಬೀಸಿದ ಬಲೆಯಂತಿದೆ. ಆ ಬಲೆಗೆ ಅನೇಕ ಜಾತಿಯ ಮೀನುಗಳು ಸಿಕ್ಕಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 “ಸರ್‍ಗಾಚೆ ರಾಜ್ ಅಸೆಬಿ ಮನುಕ್ ಹೊತಾ. ಉಲ್ಲೆ ಮಾಸೊಳ್ಯಾಕಾರ್ ಸಮುಂದರಾತ್ ಮಾಸೊಳ್ಯಾ ಧರುಕ್ ಮನುನ್ ಜಾಳೆ ಸೊಡ್ತ್ಯಾತ್ ಅನಿ ತ್ಯಾ ಜಾಳ್ಯಾತ್ ಸಗ್ಳ್ಯಾ ಜಾತಿಚ್ಯಾ ಮಾಸೊಳ್ಯಾ ಶಿರಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:47
33 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.


“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.


ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.


ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು