Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:5 - ಕನ್ನಡ ಸಮಕಾಲಿಕ ಅನುವಾದ

5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಲವು ಬೀಜಗಳು ಬಂಡೆಯ ನೆಲದಲ್ಲಿ ಬಿದ್ದವು. ಅಲ್ಲಿಯ ನೆಲದಲ್ಲಿ ಸಾಕಷ್ಟು ಮಣ್ಣಿಲ್ಲದಿದ್ದುದರಿಂದ ಬೀಜಗಳು ಬೇಗ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಉಲ್ಲೆಸೆ ಭ್ಹಿಂಯ್ ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಿಮ್ನಿರ್ ಪಡ್ಲೆ ಥೈ ಮಾಟಿ ಲೈ ಪಾತೊಳ್ ಹೊತ್ತಿ. ಥೈ ವೈಲ್ಯಾ-ವೈರ್ ಮಾಟಿ ಹೊತ್ತಿ ತಸೆಮನುನ್ ಬಿ ಲಗ್ಗುನಾಚ್ ತೆ ಉಗಾವ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:5
9 ತಿಳಿವುಗಳ ಹೋಲಿಕೆ  

ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.


ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.


ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.


ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು