Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:54 - ಕನ್ನಡ ಸಮಕಾಲಿಕ ಅನುವಾದ

54 ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೇಸು ಸಭಾಮಂದಿರದಲ್ಲಿ ಬೋಧಿಸಿದಾಗ ಜನರು ಬೆರಗಾಗಿ, “ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಅಪ್ನಾಚ್ಯಾ ಸ್ವಂತ್ ಗಾವಾಕ್ ಗೆಲೊ. ಥೈ ಸಿನಾಗೊಗಾತ್, ತೆನಿ ಲೊಕಾಕ್ನಿ ಶಿಕ್ವುಲ್ಯಾನ್, ಅನಿ ತೆನಿ ಶಿಕ್ವುತಲೆ ಆಯ್ಕಲ್ಲಿ ಲೊಕಾ ಅಜಾಪ್ ಹೊಲಿ. ಅನಿ, “ಎವ್ಡೆ ಸಗ್ಳೆ ಶಾನ್‍ಪಾನ್ ಹೆಕಾ ಖೈತ್ನಾ ಗಾವ್ಲೆ? ಅನಿ ಹ್ಯೊ ಎವ್ಡಿ ಮೊಟಿ ವಿಚಿತ್ರ್ ಕಾಮಾ ಕಶೆ ಕರುನ್ ಕರ್‍ತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:54
14 ತಿಳಿವುಗಳ ಹೋಲಿಕೆ  

ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.


ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು