Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:14 - ಕನ್ನಡ ಸಮಕಾಲಿಕ ಅನುವಾದ

14 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಹೊರಗೆ ಬಂದು ಬಹು ಜನರ ಗುಂಪನ್ನು ಕಂಡು ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ಢೊನಿತ್ನಾ ಭಾಯ್ರ್ ಯೆಲೊ ಅನಿ ಹ್ಯಾ ಎವ್ಡ್ಯಾ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಕ್ ಬಗುನ್ ತೆಕಾ ತೆಂಚ್ಯಾ ವರ್‍ತಿ ದಯಾ ಯೆಲಿ. ತೆನಿ ತ್ಯಾತುರ್‍ಲ್ಯಾ ಆರಾಮ್‍ನತ್ತ್ಯಾ ಲೊಕಾಕ್ನಿ ಆರಾಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:14
13 ತಿಳಿವುಗಳ ಹೋಲಿಕೆ  

ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು