ಮತ್ತಾಯ 14:19 - ಕನ್ನಡ ಸಮಕಾಲಿಕ ಅನುವಾದ19 ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆನಿ ಲೊಕಾಕ್ನಿ ಜಿಮ್ನಿರ್ ಗವ್ತಾ ವರ್‍ತಿ ಬಸುಕ್ ಸಾಂಗ್ಲ್ಯಾನ್; ತನ್ನಾ ತೆನಿ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಹಾತಿತ್ ಘೆಟ್ಲ್ಯಾನ್ ಅನಿ ವೈರ್ ಸರ್‍ಗಾಕ್ ಅಪ್ನಾಚಿ ನದರ್ ಲಾವ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಭಾಕ್ರಿಯಾ ಮೊಡ್ಲ್ಯಾನ್ ಅನಿ ಶಿಸಾನಿಕ್ಡೆ ದಿಲ್ಯಾನ್ ತನ್ನಾ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ. ಅಧ್ಯಾಯವನ್ನು ನೋಡಿ |