Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:2 - ಕನ್ನಡ ಸಮಕಾಲಿಕ ಅನುವಾದ

2 ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತೆನಿ ಅಪ್ನಾಚ್ಯಾ ಅದಿಕಾರ್‍ಯಾಕ್ನಿ, “ತೊ ಖರೆಚ್ ಜುವಾಂವ್ ಬಾವ್ತಿಸ್ ಮರಲ್ಲೊ ಝಿತ್ತೊ ಹೊವ್ನ್ ಯೆಲಾ, ತಸೆ ಮನುನ್ ತೆಕಾ ಮೊಟಿ ವಿಚಿತ್ರ್ ಕಾಮಾ ಕರ್‍ತಲಿ ತಾಕತ್ ಹಾಯ್,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:2
7 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.


ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.


ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,


ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.


ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು