Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:2 - ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯವನ್ನು ಯಾಕೆ ಮೀರುತ್ತಾರೆ? ಅವರು ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುತ್ತಾರಲ್ಲಾ ಎಂದು ಕೇಳಿದ್ದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಪದ್ದತಿಯಾ ಕಶ್ಯಾಕ್ ಮೊಡ್ತ್ಯಾತ್? ತೆನಿ ಜೆವ್ನಾಚ್ಯಾ ಅದ್ದಿ ಅಪ್ನಾಚಿ ಹಾತಾ ಧುವ್ನ್ ಘೆಯ್‌ನ್ಯಾತ್.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:2
10 ತಿಳಿವುಗಳ ಹೋಲಿಕೆ  

ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.


ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ?


ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.


ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು