Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:20 - ಕನ್ನಡ ಸಮಕಾಲಿಕ ಅನುವಾದ

20 ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮನುಷ್ಯನನ್ನು ಕಲುಷಿತಗೊಳಿಸುವಂಥವು ಇವೇ. ಕೈ ತೊಳೆಯದೆ ಊಟಮಾಡುವುದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನುಷ್ಯನನ್ನು ಕೆಡಿಸುವಂಥವುಗಳು ಇವೇ; ಆದರೆ ಕೈತೊಳಕೊಳ್ಳದೆ ಊಟಮಾಡುವದು ಮನುಷ್ಯನನ್ನು ಕೆಡಿಸುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹೆ ಸಗ್ಳೆ ಎಕ್ ಮಾನ್ಸಾಕ್ ಅಪ್ಪಡ್- ಸಿಪ್ಪಡ್ ಕರ್‍ತಾ. ಹಾತ್ ದುಯ್ ನಸ್ತಾನಾ ಜೆವಾನ್ ಕರ್ತಲೆ ಮಾನ್ಸಾಕ್ ಅಪ್ಪಡ್-ಸಿಪ್ವಡ್ ಕರಿನಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:20
12 ತಿಳಿವುಗಳ ಹೋಲಿಕೆ  

ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು