Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಆತನು ಆಕೆಗೆ ಏನೂ ಉತ್ತರಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು - ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ; ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಜೆಜುನ್ ತಿಚೆಕ್ಡೆ ಎಕ್ ಸಂಬದ್ ಸೈತ್ ಬೊಲುಕ್ನಾ, ತೆಚಿ ಶಿಸಾ ಫಿಡೆ ಯೆಲಿ ಅನಿ, “ತ್ಯಾ ಬಾಯ್ಕೊಮನ್ಸಿಕ್ ಹಿತ್ನಾ ಧಾಡುನ್ ದಿ. ಝುಟುಚ್ ಬೊಬ್ ಮಾರುನ್ಗೆತ್ ತಿ ಅಮ್ಚ್ಯಾ ಫಾಟ್ನಾಚ್ ಯೆವ್ಲಾ!” ಮನುನ್ ಜೆಜುಕ್ಡೆ ಲೈ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:23
8 ತಿಳಿವುಗಳ ಹೋಲಿಕೆ  

ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.


ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.


ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.


ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು