Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:24 - ಕನ್ನಡ ಸಮಕಾಲಿಕ ಅನುವಾದ

24 ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜೆಜುನ್,“ ದೆವಾನ್ ಮಾಕಾ ಖಾಲಿ ಕಳ್ದುನ್ ಬಕ್ರ್ಯಾಂಚ್ಯಾ ಸರ್ಕೆ ಅಸಲ್ಲ್ಯಾ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಸಾಟ್ನಿ ಮನುನ್ ಧಾಡುನ್ ದಿಲ್ಲೆ ಹಾಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:24
13 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು