ಮತ್ತಾಯ 15:32 - ಕನ್ನಡ ಸಮಕಾಲಿಕ ಅನುವಾದ32 ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಯೇಸು ತನ್ನ ಶಿಷ್ಯರನ್ನು ಹತ್ತರಕ್ಕೆ ಕರೆದು ಅವರಿಗೆ - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಅವರು ನನ್ನ ಬಳಿಗೆ ಬಂದು ಈಗ ಮೂರು ದಿನವಾಯಿತು; ಅವರಿಗೆ ಊಟಕ್ಕೆ ಏನೂ ಇಲ್ಲ; ಅವರನ್ನು ಉಪವಾಸವಾಗಿ ಕಳುಹಿಸಿಬಿಡುವದಕ್ಕೆ ನನಗೆ ಮನಸ್ಸಿಲ್ಲ; ದಾರಿಯಲ್ಲಿ ಬಳಲಿಹೋದಾರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ, “ಹ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಮನಾಕ್ ಬೆಜಾರ್ ಹೊವ್ಲಾ ಕಶ್ಯಾಕ್ ಮಟ್ಲ್ಯಾರ್ ತಿನ್ ದಿಸಾ ಹೊಲಿ ತೆನಿ ಮಾಜ್ಯಾ ವಾಂಗ್ಡಾಚ್ ಹಾತ್, ಅನಿ ಅತ್ತಾ ತೆಂಚೆಕ್ಡೆ ಜೆವ್ಕ್ ಕಾಯ್ಬಿ ನಾ ತೆಂಕಾ ಜೆವಾನ್ ದಿ ನಸ್ತಾನಾ ಧಾಡುನ್ ದಿವ್ಕ್ ಮಾಕಾ ಮನ್ ನಾ ತೆನಿ ವಾಟೆರ್ ಜಾತಾನಾ ಖೈಬಿ ಚಕ್ಕರ್ ಯೆವ್ನ್ ಪಡ್ತಿಲ್.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |