Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:16 - ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಸಿಮಾವ್ ಪೆದ್ರುನ್, “ತಿಯಾ ಝಿತ್ತ್ಯಾ ದೆವಾಚೊ ಲೆಕ್ ಕ್ರಿಸ್ತ್,” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:16
38 ತಿಳಿವುಗಳ ಹೋಲಿಕೆ  

ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.


ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.


ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.


ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು.


ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,


“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು