Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚೆಸಾಟ್ನಿ ಪೆದ್ರು ಮಿಯಾ ತುಕಾ ಸಾಂಗ್ತಾ, ತಿಯಾ ಎಕ್ ಮೊಟೊ ಖಡಾಪ್ ಅನಿ ಹ್ಯಾ ಖಡ್ಪಾ ವರ್‍ತಿ ಮಿಯಾ ಮಾಜ್ಯಾ ವಿಶ್ವಾಸಾಚ್ಯಾ ಲೊಕಾಂಚೊ ತಾಂಡೊ ಭಾಂದ್ತಾ, ಅನಿ ನರ್‍ಕಾಚ್ಯಾ ಬಳಾಕ್ ಸೈತ್ ಕನ್ನಾಬಿ ಹ್ಯಾ ಮಾಜ್ಯಾ ತಾಂಡ್ಯಾಕ್ ನಾಸ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:18
42 ತಿಳಿವುಗಳ ಹೋಲಿಕೆ  

ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.


ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ? ಘೋರಾಂಧಕಾರದ ಬಾಗಿಲುಗಳನ್ನು ನೀನು ಕಂಡಿರುವೆಯೋ?


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು?


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


“ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?”


“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.


ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.


ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.


ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.


ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.


“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.


ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.


ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು