Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಪೆದ್ರುನ್ ಜೆಜುಕ್ ಕಡೆಕ್ ಘೆವ್ನ್ ಗೆಲ್ಯಾನ್. ಅನಿ, “ಧನಿಯಾ, ದೆವ್ ಅಶೆ ಕರುನಸುಂದಿ. ಹೆ ಸಗ್ಳೆ ತುಕಾ ಹೊತಲೆಚ್ ನಕ್ಕೊ!” ಮನುನ್ ಜೊರ್ ಕರುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:22
8 ತಿಳಿವುಗಳ ಹೋಲಿಕೆ  

ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.


ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು