Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:7 - ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಶಿಸಾನಿ,“ಅಮ್ಚೆಕ್ಡೆ ಎಕ್‍ಬಿ ಭಾಕ್ರಿ ನಾ. ಮನುನ್ ತೊ ಅಶೆ ಮನುಲಾ ಕಾಯ್ಕಿ.” ಮನುನ್ ಅಪ್ನಾ-ಅಪ್ನಾ ಮದ್ದಿಚ್ ಬೊಲುಕ್‍ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:7
9 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.


“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.


ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.


ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?


ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.


ಅವರು ಮಾತನಾಡಿಕೊಂಡು ಚರ್ಚಿಸುತ್ತಾ ಹೋಗಲು, ಯೇಸು ತಾವೇ ಅವರನ್ನು ಸಮೀಪಿಸಿ ಅವರ ಜೊತೆಯಲ್ಲಿ ಹೋದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು