Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:2 - ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು; ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು; ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ಬಗ್ತಾ-ಬಗ್ತಾನಾಚ್ ಜೆಜುಚೊ ರುಪ್ ಬದಲ್ಲೊ. ತೆಚೆ ತೊಂಡ್ ದಿಸಾಚ್ಯಾ ಸರ್ಕೆ ಹೊಳ್ವಳುಲಾಗಲ್ಲೆ. ಅನಿ ತೆಚೆ ಕಪ್ಡೆ ಫಾಂಡ್ರೆ ಖಡ್ಡೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:2
17 ತಿಳಿವುಗಳ ಹೋಲಿಕೆ  

ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.


ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.


ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?


ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.


ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು