Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:24 - ಕನ್ನಡ ಸಮಕಾಲಿಕ ಅನುವಾದ

24 ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು. ದೇವಾಲಯದ ತೆರಿಗೆಯನ್ನು ವಸೂಲಿಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?” ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದು ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಕಪೆರ್ನೌವಿುಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಎತ್ತುವವರು ಪೇತ್ರನ ಬಳಿಗೆ ಬಂದು - ನಿಮ್ಮ ಬೋಧಕನು ದೇವಾಲಯದ ತೆರಿಗೆಯನ್ನು ಸಲ್ಲಿಸುವದಿಲ್ಲವೇ ಎಂದು ಕೇಳಲು - ಹೌದು, ಸಲ್ಲಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಲ್ಯಾ ತನ್ನಾ, ದೆವಾಚ್ಯಾ ಗುಡಿಚಿ ತೆರ್‍ಗಿ ವಸುಲ್ ಕರ್‍ತಲೆ ಪೆದ್ರುಕ್ಡೆ ಯೆಲೆ. ಅನಿ, ಗುರುಜಿ. ದೆವಾಚ್ಯಾ ಗುಡಿಚಿ ತೆರ್‍ಗಿ ಭರಿನಾ ಮನಿ ಕಾಯ್ ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:24
5 ತಿಳಿವುಗಳ ಹೋಲಿಕೆ  

ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.


ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.


ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.


ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.


ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು