Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:4 - ಕನ್ನಡ ಸಮಕಾಲಿಕ ಅನುವಾದ

4 ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಪೇತ್ರನು ಯೇಸುವಿಗೆ - ಸ್ವಾಮೀ, ನಾವು ಇಲ್ಲೇ ಇರುವದು ಒಳ್ಳೇದು. ಅಪ್ಪಣೆಯಾದರೆ ಇಲ್ಲಿ ಮೂರು ಪರ್ಣಶಾಲೆಗಳನ್ನು ಕಟ್ಟುವೆನು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆಮನುನ್ ಪೆದ್ರುನ್ ಜೆಜುಕ್,“ಧನಿಯಾ, ಅಮಿ ಹಿತ್ತೆ ಹೊತ್ತೆ ಕವ್ಡೆ ಬರೆ ಹಾಯ್! ತಿಯಾ ಸಾಂಗ್ಲ್ಯಾರ್ ಮಿಯಾ ಹಿತ್ತೆ ತಿನ್ ಝೊಪ್ಡಿ ಘಾಲ್ತಾ. ಎಕ್ ತುಕಾ ಎಕ್ ಮೊಯ್ಜೆಕ್, ಅನಿ ಎಕ್ ಎಲಿಯಾಕ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:4
16 ತಿಳಿವುಗಳ ಹೋಲಿಕೆ  

ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.


ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು