Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:28 - ಕನ್ನಡ ಸಮಕಾಲಿಕ ಅನುವಾದ

28 “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತೊ ಸೆವಕ್ ಭಾಯ್ರ್ ಗೆಲೊ, ಅನಿ ಜಾತಾನಾ ತೆಕಾ ತೆಚ್ಯಾ ವಾಂಗುಡ್ಚೊ ಎಕ್ ಆಳ್ ಗಾವ್ಲೊ. ತೆನಿ ತೆಕಾ ಎಕ್ ಸೆಂಬರ್ ರುಪಯ್ ರಿನ್ ದಿತಲೆ ಹೊತ್ತೆ. ತನ್ನಾ ತೆನಿ ತೆಕಾ ಧರ್‍ಲ್ಯಾನ್, ಅನಿ ತೆಚೊ ನರ್‍ಡೊ ಹಿಚ್ಕುನ್, ಮಾಜೆ ದಿತಲೆ ಹಾಯ್ ತೆ ಅತ್ತಾಚ್ ಮಾಕಾ ದಿ. ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:28
15 ತಿಳಿವುಗಳ ಹೋಲಿಕೆ  

ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.


ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.


ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.


“ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.


ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು.


ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.


ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.


ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.


ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು