Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:32 - ಕನ್ನಡ ಸಮಕಾಲಿಕ ಅನುವಾದ

32 “ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಅವನ ಒಡೆಯನು ಅವನನ್ನು ಕರಸಿ - ಎಲಾ ನೀಚನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ಆ ಸಾಲವನ್ನೆಲ್ಲಾ ನಾನು ಬಿಟ್ಟುಬಿಟ್ಟೆನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ರಾಜಾನ್ ತ್ಯಾ ಆಳಾಕ್ ಬಲ್ವುಲ್ಯಾನ್ ಅನಿ,ಕಿಮ್ಮತ್ ನಸಲ್ಲ್ಯಾ ಸೆವಕಾ ತಿಯಾ ಇಚಾರಲ್ಲ್ಯಾ ಸಾಟ್ನಿ ಸಗ್ಳೆ ತುಜೆ ರಿನ್ ಮಿಯಾ ಸುಟ್ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:32
7 ತಿಳಿವುಗಳ ಹೋಲಿಕೆ  

ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.


“ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.


ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.


ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.


ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು