Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಶಿಷ್ಯರು - ಹೆಂಡತಿಯ ವಿಷಯವಾಗಿ ಗಂಡನ ಧರ್ಮ ಹೀಗಿದ್ದರೆ ಮದುವೆಯಾಗುವದು ಒಳ್ಳೇದಲ್ಲ ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ, ಮದುವೆ ಆಗದಿರುವುದೇ ಉತ್ತಮ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ತೆಚ್ಯಾ ಶಿಸಾನಿ ತೆಕಾ,“ಜರ್ ತರ್ ಘೊವಾಚ್ಯಾ ಅನಿ ಬಾಯ್ಕೊಚ್ಯಾ ಮದ್ದಿ ಅಸ್ಲೆ ಸಗ್ಳೆ ರ್‍ಹಾತಾ. ತರ್ ನಗಿನ್ ಹೊಯ್‍ನಸ್ತಾನಾ ರಾಲ್ಲೆಚ್ ಬರೆ, ಕಾಯ್ಕಿ.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:10
15 ತಿಳಿವುಗಳ ಹೋಲಿಕೆ  

ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.


ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು.


ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.


ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.


ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.


ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.


ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು.


ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು