ಮತ್ತಾಯ 19:17 - ಕನ್ನಡ ಸಮಕಾಲಿಕ ಅನುವಾದ17 “ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಅವನಿಗೆ - ಒಳ್ಳೇದನ್ನು ಕುರಿತು ನನ್ನನ್ನು ಯಾಕೆ ಕೇಳುತ್ತೀ? ಒಳ್ಳೆಯವನು ಒಬ್ಬನೇ. ಆದರೆ ಆ ಜೀವದಲ್ಲಿ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ಸರಿಯಾಗಿ ನಡೆದುಕೋ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾ ಜೆಜುನ್,“ಬರೆ ಕಾಮಾಚ್ಯಾ ವಿಶಯಾತ್ ಮಾಕಾ ಕಶ್ಯಾಕ್ ಇಚಾರ್‍ತೆ? ಬರೊ ಮನುನ್ ಹೊತ್ತೊ ದೆವ್ ಎಕ್ಲೊಚ್. ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವುಚೆ ತರ್, ಜಾ ಅನಿ ಖಾಯ್ದೆ ಪಾಳ್.” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.