Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:20 - ಕನ್ನಡ ಸಮಕಾಲಿಕ ಅನುವಾದ

20 ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಯೌವನಸ್ಥನು ಆತನನ್ನು - ಇವೆಲ್ಲಕ್ಕೂ ಸರಿಯಾಗಿ ನಡಕೊಂಡಿದ್ದೇನೆ; ಇನ್ನೇನು ಕಡಿಮೆಯಾಗಿರಬಹುದು? ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ತ್ಯಾ ದಾಂಡ್ಗ್ಯಾ ಮಾನ್ಸಾನ್,“ಹಿ ಸಗ್ಳಿ ಹುಕುಮಾ ಮಿಯಾ ಪಾಳುನ್ಗೆತುಚ್ ಯೆಲಾ, ಅನಿ ಜಾಸ್ತಿಚೆ ಮಿಯಾ ಕಾಯ್ ಕರುಕ್ ಪಾಜೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:20
12 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.


ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.


ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.


ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ.


ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು