Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವನಿಗೆ - ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನು ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತೆಕಾ,“ತಿಯಾ ಸಗ್ಳೊ ಸಂಪುರ್ನ್ ಹೊವ್ಚೆ ಮಟ್ಲ್ಯಾರ್, ಜಾ ಅನಿ ತುಜೆ ಮನುನ್ ಕಾಯ್ ಹಾಯ್ ತೆ ಸಗ್ಳೆ ಇಕ್ ಅನಿ ಯೆಲ್ಲೆ ಪೈಸೆ ಗರಿಬಾಕ್ನಿ ದಿ. ಸರ್‍ಗಾ ವರ್‍ತಿ ತುಕಾ ಮೊಟಿ ಸಾವ್ಕಾರ್ಕಿ ತಯಾರ್ ರ್‍ಹಾತಾ. ಮಾನಾ ಯೆ ಅನಿ ಮಾಜ್ಯಾ ಫಾಟ್ನಾ ರ್‍ಹಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:21
31 ತಿಳಿವುಗಳ ಹೋಲಿಕೆ  

ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.


ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.


ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು.


ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು