Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:7 - ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 "ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಆತನನ್ನು - ಹಾಗಾದರೆ ತ್ಯಾಗಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಯಾಕೆ ಆಜ್ಞೆಕೊಟ್ಟನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಫಾರಿಜೆವಾನಿ,“ತರ್ ಎಕ್ ಘೊಮನ್ಸಾನ್ ಸೊಡ್‍ ಚಿಟಿ ಲಿವ್ನ್ ದಿವ್ನ್ ಅಪ್ನಾಚ್ಯಾ ಬಾಯ್ಕೊಕ್ ಸೊಡುಕ್ ಹೊತಾ ಮನುನ್ ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಕಶ್ಯಾಕ್ ಲಿವ್ನ್ ಥವ್ಲ್ಯಾನಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:7
9 ತಿಳಿವುಗಳ ಹೋಲಿಕೆ  

“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.


ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.


“ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. “ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ,” ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ. ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.


ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು.


ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು