Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:11 - ಕನ್ನಡ ಸಮಕಾಲಿಕ ಅನುವಾದ

11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತ್ಯಾ ಘರಾತ್ ಗೆಲ್ಯಾನಿ ಅನಿ ತೆಚ್ಯಾ ಬಾಯ್ ಮರಿಕ್ಡೆ ಹೊತ್ತ್ಯಾ ಪೊರಾಕ್ ಬಗುನ್ ಡೊಗ್ಲಾ ಟೆಕುನ್ ತೆಕಾ ಮಾನ್ ಕರ್‍ಲ್ಯಾನಿ. ಮಾನಾ ಅಪ್ನಿ ಹಾನಲ್ಲೆ ಸೊನೆ, ಧುಪ್ ಅನಿ ರಗಾತ್ಬೊಳ್ ಕಾನಿಕ್ ಮನುನ್ ತ್ಯಾ ಪೊರಾಕ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:11
33 ತಿಳಿವುಗಳ ಹೋಲಿಕೆ  

ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.


“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.


ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.


ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್,


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.


ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ.


“ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.


ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು.


ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.


ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು, ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು