Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:13 - ಕನ್ನಡ ಸಮಕಾಲಿಕ ಅನುವಾದ

13 ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಿ ಭೆಟುಕ್ ಎಲ್ಲಿ ಲೊಕಾ ಗೆಲ್ಲ್ಯಾ ತನ್ನಾ ಸರ್ವೆಸ್ವರಾಚೊ ಎಕ್ ದುತ್ ಜುಜೆಕ್ ಸಪ್ನಾತ್ ದಿಸ್ಲೊ, ಅನಿ, “ಉಟ್, ಹೆರೊದ್ ಬಾಳ್ಶ್ಯಾಚೊ ಜಿವ್ ಕಾಡುಕ್ ಮನುನ್ ಹುಡ್ಕುನ್ಗೆತ್ ಯೆನಾರ್ ಹಾಯ್, ಬಾಳ್ಶ್ಯಾಕ್ ಅನಿ ತೆಚ್ಯಾ ಅವ್ಸಿಕ್ ಘೆ ಅನಿ ಇಜಿಪ್ತಾಕ್ ಪಳುನ್ ಜಾ, ಅನಿ ಮಿಯಾ ಸಾಂಗಿ ಪತರ್ ಥೈಚ್ ರ್‍ಹಾ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:13
29 ತಿಳಿವುಗಳ ಹೋಲಿಕೆ  

ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ,


ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.


ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.


ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು.


ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.


ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.


ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.


ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.


ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.


ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು