Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:15 - ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೆರೋದನು ಸಾಯುವ ತನಕ ಯೋಸೇಫನು ಈಜಿಪ್ಟಿನಲ್ಲೇ ಇದ್ದನು. “ನಾನು ನನ್ನ ಮಗನನ್ನು ಈಜಿಪ್ಟಿನೊಳಗಿಂದ ಕರೆದೆ” ಎಂದು ಪ್ರವಾದಿಯ ಮೂಲಕ ಪ್ರಭು ಹೇಳಿದ್ದ ಮಾತು ಇದರಿಂದ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹೆರೊದ್ ರಾಜಾ ಮರಿ ಪತರ್ ತೆನಿ ಇಜಿಪ್ತಾತುಚ್ ರ್‍ಹಾಲ್ಯಾನಿ. ಅಶೆ ಸರ್ವೆಸ್ವರಾನ್ ಪ್ರವಾದ್ಯಾಚ್ಯಾ ತೊಂಡಾನಿತ್ನಾ “ಇಜಿಪ್ತಾತ್ನಾ ಮಿಯಾ ಮಾಜ್ಯಾ ಲೆಕಾಕ್ ಬಲ್ವುತಾ” ಮನುನ್ ಸಾಂಗಲ್ಲೆ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:15
21 ತಿಳಿವುಗಳ ಹೋಲಿಕೆ  

“ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.


ಆಗ ನೀನು ಫರೋಹನಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲ ನನ್ನ ಮಗನು, ನನ್ನ ಜೇಷ್ಠಪುತ್ರನು.


“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:


ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.


ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,


ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.


ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,


ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:


ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು


ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು