Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:18 - ಕನ್ನಡ ಸಮಕಾಲಿಕ ಅನುವಾದ

18 “ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಅಳುವಿಕೆಯೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲದೆ ಇದ್ದಳು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ರಾಮಾ ಮನ್ತಲ್ಯಾ ಶಾರಾತ್, ಎಕ್ ಬೊಬ್ ಆಯ್ಕೊ ಯೆಲಿ, ಎಗ್ದಮ್ ತರಾಸಾಚೊ ವಿಪ್ಳಾಪ್ ಅನಿ ರಡ್ನ್ಯಾಚೊ ಅವಾಜ್ ತೊ, ರಾಖ್ಹೆಲ್ ಅಪ್ನಾಚ್ಯಾ ಪೊರಾಂಚ್ಯಾಸಾಟ್ನಿ ರಡುಲಾಗಲ್ಲಿ ತಿಚಿ ಪೊರಾ ಮರಲ್ಲಿ, ತಿಕಾ ಕವ್ಡೆ ಸಮಾದಾನ್ ಸಾಂಗ್ಲ್ಯಾರ್‍ಬಿ ತಿ ಆಯ್ಕುಕ್ ತಯಾರ್ ನತ್ತಿ. ಮನುನ್. ಸಾಂಗಲ್ಲೆ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:18
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.


ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು.


ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.


ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:


ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು