Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:4 - ಕನ್ನಡ ಸಮಕಾಲಿಕ ಅನುವಾದ

4 ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆಸೇರಿಸಿದನು. “ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಯೆಹೂದ್ಯರ ಎಲ್ಲಾ ಮಹಾಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ - ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೂಡಲೇ, ಹೆರೋದನು ಎಲ್ಲಾ ಮಹಾಯಾಜಕರನ್ನೂ ಧರ್ಮೋಪದೇಶಕರನ್ನೂ ಸಭೆ ಸೇರಿಸಿ, “ಕ್ರಿಸ್ತನು ಹುಟ್ಟಬೇಕಾಗಿದ್ದ ಸ್ಥಳ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೆರೊದಾನ್ ಸಗ್ಳ್ಯಾ ಮುಖ್ಯ ಯಾಜಕಾಕ್ನಿ ಅನಿ ಮೊಯ್ಜೆಚಿ ಶಾಸ್ತರಾ ಶಿಕ್ವುತಲ್ಯಾಕ್ನಿ ಎಕಾಕ್ಡೆ ಬಲ್ವುಕ್ ಲಾವ್ಲ್ಯಾನ್, ಅನಿ “ಕ್ರಿಸ್ತ್ ಖೈ ಜಲಮ್ತಲೊ ಹಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:4
30 ತಿಳಿವುಗಳ ಹೋಲಿಕೆ  

ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.


ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.


ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.


ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.


ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.


ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?


ಮುಖ್ಯಯಾಜಕರೂ ನಿಯಮ ಬೋಧಕರು ನಿಂತುಕೊಂಡು ಬಲವಾಗಿ ಯೇಸುವಿನ ಮೇಲೆ ದೂರುಗಳನ್ನು ಹೇಳುತ್ತಿದ್ದರು.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.


ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.


ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು


ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು.


ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.


ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.


ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.


ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು