Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜೋಯಿಸರನ್ನು ಕರೆಸಿ ಆ ನಕ್ಷತ್ರವು ಕಾಣಿಸಿದ ಕಾಲವನ್ನು ಅವರ ಕಡೆಯಿಂದ ಚೆನ್ನಾಗಿ ತಿಳುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಹೆರೊದ್ ರಾಜಾನ್ ತ್ಯಾ ಭೆಟುಕ್ ಯೆಲ್ಲ್ಯಾಕ್ನಿ ಕಡೆಕ್ ಬಲ್ವುನ್ ಘುಟಾನ್ ತೆ ಚಿಕ್ಕಿ ದಿಸಲ್ಲೊ ಎಳ್ ಇಚಾರುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:7
16 ತಿಳಿವುಗಳ ಹೋಲಿಕೆ  

ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


“ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.


ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು