ಮತ್ತಾಯ 20:12 - ಕನ್ನಡ ಸಮಕಾಲಿಕ ಅನುವಾದ12 ‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 “ಅಮಿ ಸಕ್ಕಾಳ್ಚ್ಯಾನ್ ನಿಂಬ್ರಾತ್ ಅನಿ ಗರ್‍ಮಿತ್ ಕಾಮ್ ಕರ್ಲಾಂವ್, ಅನಿ ಹೆನಿ ಖಾಲಿ ಎಕುಚ್ ಎಕ್ ತಾಸ್ ಕಾಮ್ ಕರ್‍ಲ್ಯಾನಾತ್ ತೆಕಾಬಿ ಅಮ್ಕಾಬಿ ತವ್ಡಿಚ್ ಮಜುರಿ ದಿಲೆ”. ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |