Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:15 - ಕನ್ನಡ ಸಮಕಾಲಿಕ ಅನುವಾದ

15 ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾಜೆ ಸ್ವತಾಚೆ ಪೈಸೆ ಮಿಯಾ ಮಾಕಾ ಪಾಜೆ ತಸೆ ಕರುಕ್ ಮಾಕಾ ಹಕ್ಕ್ ನಾ ಕಾಯ್? ಅನಿ ಎಕ್ಲ್ಯಾಕ್ ಬರೆ ಕರ್‍ತಲೆ ಬಗುನ್ ಪೊಟಾತ್ ಜಳುಲಾ ಕಾಯ್‍? ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:15
24 ತಿಳಿವುಗಳ ಹೋಲಿಕೆ  

“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ.


ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.


ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


“ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.


ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು