Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:16 - ಕನ್ನಡ ಸಮಕಾಲಿಕ ಅನುವಾದ

16 “ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಜೆಜುನ್,“ ಜೆ ಕೊನ್ ಫಿಡೆ ಹಾತ್ ತೆನಿ ಫಾಟಿ ಹೊತ್ಯಾತ್, ಅನಿ ಜೆ ಕೊನ್ ಫಾಟಿ ಹಾತ್ ತೆನಿ ಫಿಡೆ ಹೊತ್ಯಾತ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:16
18 ತಿಳಿವುಗಳ ಹೋಲಿಕೆ  

ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು.


“ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.


ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


“ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.


ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ”


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


“ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು