ಮತ್ತಾಯ 20:20 - ಕನ್ನಡ ಸಮಕಾಲಿಕ ಅನುವಾದ20 ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಜೆಬೆದಾಯನ ಮಕ್ಕಳ ತಾಯಿ ಆತನಿಂದ ಏನೋ ಒಂದು ಬೇಡಿಕೊಳ್ಳಬೇಕೆಂದು ತನ್ನ ಮಕ್ಕಳನ್ನು ಕರಕೊಂಡು ಬಂದು ಆತನಿಗೆ ಅಡ್ಡಬಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಜೆಬೆದಾಯನ ಹೆಂಡತಿಯು ಯೇಸುವಿನ ಬಳಿಗೆ ಬಂದಳು. ಅವಳ ಗಂಡುಮಕ್ಕಳು ಅವಳೊಂದಿಗಿದ್ದರು. ಅವಳು ಯೇಸುವಿನ ಮುಂದೆ ಅಡ್ಡಬಿದ್ದು ತನ್ನ ಕೋರಿಕೆಯನ್ನು ಈಡೇರಿಸಬೇಕೆಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮಾನಾ ಜೆಬೆದೆವಾಚಿ ಬಾಯ್ಕೊ ಅಪ್ನಾಚ್ಯಾ ದೊನ್ ಲೆಕಾಂಚ್ಯಾ ವಾಂಗ್ಡಾ ಜೆಜುಕ್ಡೆ ಯೆವ್ನ್ ತೆಚ್ಯಾ ಇದ್ರಾಕ್ ಮಾನ್ ಬಾಗ್ವುಲಿನ್ , ಅನಿ ಎಕ್ ಉಪ್ಕಾರ್ ಇಚಾರ್‍ಲಿನ್. ಅಧ್ಯಾಯವನ್ನು ನೋಡಿ |