Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:26 - ಕನ್ನಡ ಸಮಕಾಲಿಕ ಅನುವಾದ

26 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮಲ್ಲಿ ಹಾಗಿರಬಾರದು; ಆದರೆ ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನೀವು ಹಾಗೆ ಮಾಡಬಾರದು. ನಿಮ್ಮಲ್ಲಿ ದೊಡ್ಡವನಾಗಲು ಇಚ್ಫಿಸುವವನು ಸೇವಕನಂತೆ ಸೇವೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ತುಮ್ಚ್ಯಾ ಮದ್ದಿ ತಸೆ ಹೊವ್ಚೆ ನ್ಹಯ್, ಜರ್ ತುಮ್ಚ್ಯಾತ್ಲೊ ಕೊನ್‍ಬಿ ಮೊಟೊ ಹೊವ್ಚೆ ಮನುನ್ ಯವಜ್ತಾ, ತೆನಿ ಹುರಲ್ಲ್ಯಾ ಸಗ್ಳ್ಯಾಂಚೊ ಸೆವಕ್ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:26
23 ತಿಳಿವುಗಳ ಹೋಲಿಕೆ  

ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.


ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.


“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


“ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.


ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.


ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.


ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ.


ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು