ಮತ್ತಾಯ 20:28 - ಕನ್ನಡ ಸಮಕಾಲಿಕ ಅನುವಾದ28 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಮಾನ್ಸಾಚೊ ಲೆಕ್ ಲೊಕಾನಿಕ್ನಾ ಸೆವಾ ಕರುನ್ ಘೆವ್ಕ್ ಮನುನ್ ಯೆವ್ಕ್ ನಾ. ತೊ ಸೆವಾ ಕರುಕ್ ಅನಿ ಲೈ ಲೊಕಾಂಚ್ಯಾ ಸಾಟ್ನಿ ಜಿವ್ ದಿವ್ನ್ ತೆಂಕಾ ಸುಟ್ಕಾ ದಿವ್ಚೆ ಮನುನ್ ಯೆಲಾ!” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |