Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:7 - ಕನ್ನಡ ಸಮಕಾಲಿಕ ಅನುವಾದ

7 “ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಅದಕ್ಕೆ ಅವರು, ‘ನಮಗೆ ಯಾರೂ ಕೆಲಸ ಕೊಡಲಿಲ್ಲ’ ಎಂದು ಉತ್ತರಕೊಟ್ಟರು. “ಆ ಯಜಮಾನನು, ‘ಹಾಗಾದರೆ ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡಿರಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತೆನಿ, ಅಮ್ಕಾ ಕೊನ್ಬಿ ಕಾಮಾಕ್ ಬಲ್ವುಕ್‍ನ್ಯಾತ್. ಮನುನ್ ಸಾಂಗ್ಲ್ಯಾನಿ. ತನ್ನಾ ತೆನಿ ತೆಂಕಾ,ತಸೆ ಜಾಲ್ಯಾರ್ ತುಮಿಬಿ ಜಾವಾ ಅನಿ ಮಾಜ್ಯಾ ಶೆತಾತ್ ಕಾಮಾಕ್‍ಲಾಗಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:7
16 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.


ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.


ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು.


“ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು