ಮತ್ತಾಯ 20:8 - ಕನ್ನಡ ಸಮಕಾಲಿಕ ಅನುವಾದ8 “ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಾಂಚೆಕ್ಡೆ ತ್ಯಾ ಮಳ್ಯಾಚ್ಯಾ ಮಾಲ್ಕಾನ್ ಅಪ್ನಾಚ್ಯಾ ಮಕಾದಮಾಕ್ ಬಲ್ವುಲ್ಯಾನ್. ಅನಿ, ಅದ್ದಿ ಬಲ್ವಲ್ಲ್ಯಾಕ್ನಾ ಧರುನ್ ಆಕ್ರಿಕ್ ಬಲ್ವಲ್ಲ್ಯಾ ಪತರ್ ಸಗ್ಳ್ಯಾಕ್ನಿ ತೆಂಚಿ-ತೆಂಚಿ ದಿಸಾಚಿ ಮಜುರಿ ವಾಟುನ್ ದಿ. ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |