Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:22 - ಕನ್ನಡ ಸಮಕಾಲಿಕ ಅನುವಾದ

22 ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜರ್ ತರ್ ತುಮ್ಕಾ ವಿಶ್ವಾಸ್ ಹಾಯ್ ತರ್ ತುಮಿ ಮಾಗಲ್ಲೆ ಸಗ್ಳೆ ತುಮಿ ಘೆತ್ಯಾಶಿ.”ಮನುನ್ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:22
11 ತಿಳಿವುಗಳ ಹೋಲಿಕೆ  

“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.


ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.


“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು