Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:25 - ಕನ್ನಡ ಸಮಕಾಲಿಕ ಅನುವಾದ

25 ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ? ಮನುಷ್ಯರಿಂದಲೋ ಅಂದನು. ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ನಮಗೆ ಹೇಳಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಜುವಾಂವ್ ಬಾವ್ತಿಸಾಕ್ ಬಾಲ್ತಿಮ್ ದಿತಲೊ ಹಕ್ಕ್ ಖೈತ್ನಾ ದಿಲ್ಲೊ ಹೊತ್ತೊ ಮಾನ್ಸಾಕ್ನಾ ಕಾಯ್ ಸರ್ಗಾತ್ನಾ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಎಕಾಮೆಕಾತ್ನಿ ಬೊಲುನ್ ಘೆವ್ನ್, “ಅಮಿ ಕಾಯ್ ಸಾಂಗುವಾ? ದೆವಾಕ್ನಾ ಮಟ್ಲ್ಯಾರ್, ‘ತುಮಿ ಜುವಾಂವಾ ವರ್‍ತಿ ಕಶ್ಯಾಕ್ ವಿಶ್ವಾಸ್ ಕರುಕ್‍ನ್ಯಾಶಿ?’ ಮನುನ್ ತೊ ಇಚಾರ್ತಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:25
24 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.


“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.


ಆಗ ಅವರು ತಮ್ಮೊಳಗೆ, “ ‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.


ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.


ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.


ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,


‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.


ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು