ಮತ್ತಾಯ 21:26 - ಕನ್ನಡ ಸಮಕಾಲಿಕ ಅನುವಾದ26 ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗ್ಲಾಂವ್ ತರ್ ಲೊಕಾ ಅಮ್ಕಾ ಕಾಯ್ ಕರ್‍ತ್ಯಾತ್ ಕಾಯ್ಕಿ ಮಟ್ಲ್ಯಾನಿ ಅನಿ ತೆನಿ ಲೊಕಾಕ್ನಿ ಭಿಂಯಾಲೆ. ಕಶ್ಯಾಕ್ ಮಟ್ಲ್ಯಾರ್ ಲೊಕಾ ಜುವಾಂವ್ ಎಕ್ ಪ್ರವಾದಿ ಮನುನ್ ಮಾನಿತ್. ಅಧ್ಯಾಯವನ್ನು ನೋಡಿ |