Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:3 - ಕನ್ನಡ ಸಮಕಾಲಿಕ ಅನುವಾದ

3 ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾವನಾದರೂ ನಿಮ್ಮನ್ನು ಏನಾದರೂ ಕೇಳಿದರೆ, ‘ಇವು ಪ್ರಭುವಿಗೆ ಬೇಕಾಗಿವೆ’ ಎನ್ನಿ. ಅವನು ತಕ್ಷಣ ಕಳುಹಿಸಿಕೊಡುವನು,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ಇವು ಸ್ವಾವಿುಯವರಿಗೆ ಬೇಕಾಗಿವೆ ಅನ್ನಿರಿ; ಕೂಡಲೆ ಅವುಗಳನ್ನು ಬಿಟ್ಟುಕೊಡುವನು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಏಕೆ ಕತ್ತೆಗಳನ್ನು ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಿಮ್ಮನ್ನು ಯಾರಾದರೂ ಕೇಳಿದರೆ, ‘ಈ ಕತ್ತೆಗಳು ಗುರುವಿಗೆ ಬೇಕಾಗಿವೆ. ಆತನು ಅವುಗಳನ್ನು ಬೇಗನೆ ಹಿಂದಕ್ಕೆ ಕಳುಹಿಸುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ತುಮ್ಕಾ ಕೊನ್‍ಬಿ ಕಾಯ್ಬಿ ಇಚಾರ್ಲ್ಯಾರ್ ತೆಂಚ್ಯಾ ಧನಿಯಾಕ್ ತಿ ಪಾಜೆ ಹೊಲ್ಯಾತ್ ಅನಿ ಮಾನಾ ಲಗ್ಗುನಾಚ್ ತೊ ತೆಂಕಾ ಧಾಡುನ್ ದಿತಾ. ಮನುನ್ ಸಾಂಗಾ.” ಮನುನ್ ಸಾಂಗಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:3
18 ತಿಳಿವುಗಳ ಹೋಲಿಕೆ  

ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:


“ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.


ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.


ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು