Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:42 - ಕನ್ನಡ ಸಮಕಾಲಿಕ ಅನುವಾದ

42 ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಜೆಜುನ್ ತೆಂಕಾ,“ಪವಿತ್ರ್ ಪುಸ್ತಕ್ ಕಾಯ್ ಮನ್ತಾ ಮನುನ್ ತುಮಿ ವಾಚ್ವುಕ್‍ನ್ಯಾಶಿ ಕಾಯ್? ಭಾಂದ್ತಲ್ಯಾನಿ ಕಾಮಾಕ್ ಪಡಿನಸಲ್ಲೊ ಮನುನ್ ಟಾಕಲ್ಲೊ, ಗುಂಡೊಚ್ ಎಗ್ದಮ್ ಲೈ ಮಹತ್ವಾಚೊ ಗುಂಡೊ ಹೊಲೊ. ಸರ್ವೆಸ್ವರಾನ್ ಕರಲ್ಲೆ ಕಾಮ್ ಹೆ ಬಗುಕ್ ಹೆ ಕವ್ಡೆ ವಿಚಿತ್ರ್ ದಿಸ್ತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:42
13 ತಿಳಿವುಗಳ ಹೋಲಿಕೆ  

ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


“ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು