Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನಸಮೂಹದಲ್ಲಿ ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರದೆಲೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ಚಿಗುರುಗಳನ್ನು ಕೊಯಿದು ದಾರಿಯಲ್ಲಿ ಹರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಲೊಕಾನಿ ಅಪ್ನಾಚೆ ಕಪ್ಡೆ ರಸ್ತ್ಯಾ ವರ್‍ತಿ ಹಾತರ್‍ಲ್ಯಾನಿ. ಅನಿ ಹುರಲ್ಲ್ಯಾನಿ ಝಾಡಾಂಚ್ಯಾ ಕವ್ಳ್ಯಾ ಟಾಳಿಯಾ ಮೊಡುನ್ ರಸ್ತ್ಯಾ ವರ್‍ತಿ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:8
6 ತಿಳಿವುಗಳ ಹೋಲಿಕೆ  

ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.


ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.


ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.


ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು