Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:3 - ಕನ್ನಡ ಸಮಕಾಲಿಕ ಅನುವಾದ

3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಮದುವೆಗೆ ಹೇಳಿಸಿಕೊಂಡವರನ್ನು ಕರೆಯುವದಕ್ಕೆ ತನ್ನ ಆಳುಗಳನ್ನು ಕಳುಹಿಸಲು ಬರುವದಕ್ಕೆ ಅವರಿಗೆ ಮನಸ್ಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ರಾಜನು ಕೆಲವು ಜನರನ್ನು ಔತಣಕ್ಕೆ ಆಹ್ವಾನಿಸಿದನು. ಅಡಿಗೆ ಸಿದ್ಧವಾದ ಬಳಿಕ ರಾಜನು ತನ್ನ ಸೇವಕರ ಮೂಲಕ ಆ ಜನರಿಗೆ ತಿಳಿಸಿದನು. ಆದರೆ ಅವರು ಔತಣಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಮಾನಾ ಅಪ್ನಾಚ್ಯಾ ಸೈರ್‍ಯಾಕ್ನಿ ಲಗ್ನಾಚ್ಯಾ ಕಾರೆವಾಕ್ ಯೆವಾ ಮನುನ್ ಬಲ್ವುಕ್ ಅಪ್ನಾಚ್ಯಾ ಆಳಾಕ್ ಧಾಡುನ್ ದಿಲ್ಯಾನ್. ಖರೆ ತ್ಯಾ ಸೈರ್‍ಯಾಕ್ನಿ ತ್ಯಾ ಲಗ್ನಾಕ್ ಯೆವ್ಕ್ ಮನುಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:3
30 ತಿಳಿವುಗಳ ಹೋಲಿಕೆ  

ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.


ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.


ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು:


ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು