ಮತ್ತಾಯ 22:4 - ಕನ್ನಡ ಸಮಕಾಲಿಕ ಅನುವಾದ4 “ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆಮನುನ್ ಅನಿ ಎಗ್ದಾ ತ್ಯಾ ರಾಜಾನ್ ಅಪ್ನಾಚ್ಯಾ ಆಳಾಕ್ನಿ, “ಜಾವಾ ಅನಿ ತ್ಯಾ ಸೈರ್‍ಯಾಕ್ನಿ ಬಕ್ರಿ ಅನಿ ಪಾಡ್ಕಾ ಕಾತ್ರುನ್ ಗರ್‍ದಿಚೆ ಜೆವಾನ್ ರಾಂದುನ್ ತಯಾರ್ ಕರುನ್ ಹೊಲಾ. ಜೆವ್ನಾಕ್ ಯೆವಾ ಮನುನ್ ಸಾಂಗಾ.” ಮನುನ್ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.