Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:40 - ಕನ್ನಡ ಸಮಕಾಲಿಕ ಅನುವಾದ

40 ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಈ ಎರಡು ಆಜ್ಞೆಗಳು ಎಲ್ಲಾ ಧರ್ಮಶಾಸ್ತ್ರಕ್ಕೂ ಪ್ರವಾದನಗ್ರಂಥಕ್ಕೂ ಆಧಾರವಾಗಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಸಗ್ಳೆ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದ್ಯಾಂಚೆ ಶಿಕಾಪ್ ಹ್ಯಾ ದೊನ್ ಖಾಯ್ದ್ಯಾಂಚ್ಯಾ ವರ್‍ತಿಚ್ ಠಿಕುನ್ ಹಾತ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:40
9 ತಿಳಿವುಗಳ ಹೋಲಿಕೆ  

ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು